MAHITHIVEDIKE
Monday, March 23, 2020
ಚಿಕ್ಕಬಳ್ಳಾಪುರ ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗಾವಕಾಶ.. ಏ.13 ರೊಳಗೆ ಅರ್ಜಿ ಹಾಕಿ
Friday, March 20, 2020
ವಾಟ್ಸಾಪ್‌ನಲ್ಲಿ 'MyGov ಕೊರೊನಾ ಸಹಾಯಕೇಂದ್ರ' ಆರಂಭಿಸಿದ ಕೇಂದ್ರ ಸರ್ಕಾರ
ಇದು ವಾಟ್ಸಾಪ್‌ನಲ್ಲಿ ಲಭ್ಯವಿದ್ದು, ಕೊರೊನಾ ಕುರಿತು ನಿಮಗೆ ಕಾ
ಡುವ ಅನುಮಾನ, ಕುತೂಹಲಗಳಿಗೆ ಈ ಆಪ್ ನಲ್ಲಿ ಉತ್ತರ ಪಡೆಯಬಹುದು. ಕೊರೊನಾ ಕುರಿತಂತೆ ಸಂದೇಶಗಳಿದ್ದರೂ ಈ ವಾಟ್ಸಾಪ್ ಚಾಟ್‌ಬಾಟ್ ಮೂಲಕ ಸಿಗುತ್ತೆ.
ಅದಕ್ಕಾಗಿ ನೀವು ಮಾಡಬೇಕಾಗಿರುವುದು ಇಷ್ಟೆ. ನಿಮ್ಮ ಫೋನ್‌ನಲ್ಲಿ 9013151515 ಸಂಖ್ಯೆ ಸೇವ್ ಮಾಡಿಕೊಳ್ಳಿ. ಕೊರೊನಾ ಬಗ್ಗೆ ನಿಮಗೆ ಏನಾದರೂ ಮಾಹಿತಿ ಬೇಕು ಅಂದ್ರೆ ಈ ನಂಬರ್‌ಗೆ ಸಂದೇಶ ರವಾನಿಸಿ, ತಕ್ಷಣ ಮಾಹಿತಿ ಸಿಗುತ್ತೆ.
ಈ ವಾಟ್ಸಾಪ್ ಚಾಟ್‌ಬಾಟ್ ಸ್ವಯಂಚಾಲಿತವಾಗಿರುತ್ತದೆ ಮತ್ತು ಕೊರೊನಾಗೆ ಸಂಬಂಧಪಟ್ಟಂತೆ ಕೇಂದ್ರ ಇಲಾಖೆಯಿಂದ ಸ್ಪಷ್ಟ ಮಾಹಿತಿ ಸಿಗುತ್ತದೆ ಎಂದು ತಿಳಿಸಲಾಗಿದೆ. ಈ ಮೂಲಕ ವಾಟ್ಸಾಪ್, ಸೋಶಿಯಲ್ ಮೀಡಿಯಾಗಳಲ್ಲಿ ಹರಡುವ ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ.
ಮೈಗೋವ್ ಕೊರೊನಾ ಸಹಾಯಕೇಂದ್ರ ವಾಟ್ಸಾಪ್ ಚಾಟ್‌ಬಾಟ್ ಬಿಟ್ಟು ಕೇಂದ್ರ ಸಹಾಯವಾಣಿ ಮತ್ತು ಆಯಾ ರಾಜ್ಯಗಳ ಸಹಾಯವಾಣಿ ಕೇಂದ್ರಗಳು ಕಾರ್ಯರೂಪದಲ್ಲಿದೆ. ಇದುವರೆಗೂ ಭಾರತದಲ್ಲಿ 206ಕ್ಕೂ ಹೆಚ್ಚು ಕೊರೊನಾ ಸೋಂಕಿತರು ದೃಢಪಟ್ಟಿದ್ದಾರೆ.
Thursday, March 19, 2020
ಧಾರವಾಡದಲ್ಲಿ 2 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ 2 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ
Wednesday, March 11, 2020
KARTET: ಪರೀಕ್ಷಾ ದಿನಾಂಕ ಮುಂದೂಡಿಕೆ
SEBI: 147 ಸಹಾಯಕ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿ...ತಿಂಗಳಿಗೆ 55,600/-ರೂ ವೇತನ ಪಡೆಯುವ ಅವಕಾಶ
| CRITERIA | DETAILS |
| Name Of The Posts | ಸಹಾಯಕ ವ್ಯವಸ್ಥಾಪಕ (ಗ್ರೇಡ್ ಎ) |
| Organisation | ಸೆಕ್ಯುರಿಟಿ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) |
| Educational Qualification | ಸ್ನಾತಕೋತ್ತರ ಪದವಿ, ಕಾನೂನು ಪದವಿ, ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ, ಪದವಿ, ಸ್ನಾತಕೋತ್ತರ ಪದವಿ |
| Job Location | ಭಾರತದೆಲ್ಲೆಡೆ |
| Salary Scale | ತಿಂಗಳಿಗೆ 28,150/-ರಿಂದ 55,600/-ರೂ |
| Application Start Date | March 7, 2020 |
| Application End Date | March 23, 2020 |
ವಿದ್ಯಾರ್ಹತೆ:
ವಯೋಮಿತಿ:
ವೇತನದ ವಿವರ:
ಆಯ್ಕೆ ಪ್ರಕ್ರಿಯೆ:
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವುದು ಹೇಗೆ:
BEL Recruitment 2020: ವಿಸಿಟಿಂಗ್ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
| CRITERIA | DETAILS |
| Name Of The Posts | ವಿಸಿಟಿಂಗ್ ವೈದ್ಯಕೀಯ ಅಧಿಕಾರಿ |
| Organisation | ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) |
| Educational Qualification | ಬಿ.ಎ.ಎಂ.ಎಸ್/ಬಿ.ಹೆಚ್.ಎಂ.ಎಸ್. |
| Job Location | ಚೆನ್ನೈ- ತಮಿಳುನಾಡು |
| Application End Date | March 31, 2020 |
ವಿದ್ಯಾರ್ಹತೆ:
ವಯೋಮಿತಿ:
ವೇತನದ ವಿವರ:
ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸುವುದು ಹೇಗೆ:
Tuesday, March 10, 2020
ಪ್ರವಾಸೋದ್ಯಮ ಇಲಾಖೆಯಲ್ಲಿ ಉದ್ಯೋಗ ಬೇಕಾ ?...ಹಾಗಿದ್ರೆ ಇಲ್ಲಿದೆ ಅದ್ಭುತ ಅವಕಾಶ
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು 18 ಸಹಾಯಕ ವ್ಯವಸ್ಥಾಪಕರು, ಅಡುಗೆಯವರು, ಸ್ವಾಗತಗಾರರು, ಉಗ್ರಾಣಿಕರು ಮತ್ತು ಇತರೆ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಮಾರ್ಚ್ 20,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.
ಖಾಲಿ ಹುದ್ದೆಗಳು: ಸಹಾಯಕ ವ್ಯವಸ್ಥಾಪಕರು ಅಡುಗೆಯವರು ಸ್ವಾಗತಗಾರರು ಉಗ್ರಾಣಿಕರು ದ್ವಿತೀಯ ದರ್ಜೆ ಲೆಕ್ಕ ಸಹಾಯಕರು /ಬಿಲ್ ಕ್ಲರ್ಕ್ / ಕ್ಯಾಷಿಯರ್ ಸಹಾಯಕ ಅಡುಗೆಯವರು ಅಡುಗೆ ಸಹಾಯಕರು ಮಾಣಿ ರೂಂ ಬಾಯ್ ಗಾರ್ಡನರ್ ಸಾಮಾನ್ಯ ಉಪಯೋಗಿ ಕೆಲಸಗಾರರು
ವಿದ್ಯಾರ್ಹತೆ: ಸಹಾಯಕ ವ್ಯವಸ್ಥಾಪಕರು, ಸ್ವಾಗತಗಾರರು ಹುದ್ದೆಗಳಿಗೆ ಹೋಟೆಲ್ ನಿರ್ವಹಣೆಯ ಕುರಿತು ಡಿಪ್ಲೋಮಾ ಪದವಿ, ಅಡುಗೆಯವರು ಮತ್ತು ಸಹಾಯಕ ಅಡುಗೆಯವರು ಹುದ್ದೆಗಳಿಗೆ 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯೊಂದಿಗೆ ಕ್ರಾಫ್ಟ್ಸ್‌ಮೆನ್‌ಶಿಪ್ ಸರ್ಟಿಫಿಕೇಟ್ ಕೋರ್ಸ್ ಇನ್ ಫುಡ್ ಪ್ರೊಡಕ್ಷನ್ ಮತ್ತು ಪಾಟಿಸ್ಸರಿಕ್ ಹೊಂದಿರಬೇಕು. ಉಗ್ರಾಣಿಕರು ಹುದ್ದೆಗಳಿಗೆ ಪಿ.ಯು.ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ದ್ವಿತೀಯ ದರ್ಜೆ ಲೆಕ್ಕ ಸಹಾಯಕರು /ಬಿಲ್ ಕ್ಲರ್ಕ್ / ಕ್ಯಾಷಿಯರ್ ಹುದ್ದೆಗಳಿಗೆ (ಎಐಸಿಟಿಇ)/ಯುಜಿಸಿ ಇಂದ ಗುರುತಿಸಲಾದ ವಿಶ್ವವಿದ್ಯಾಲಯದಲ್ಲಿ ವಾಣಿಜ್ಯ ವಿಭಾಗದಲ್ಲಿ ಪದವಿ ಹೊಂದಿರಬೇಕು (ಬಿ.ಕಾಂ/ಬಿ.ಬಿ.ಎಂ) ಅಡುಗೆ ಸಹಾಯಕರು, ಮಾಣಿ, ರೂಂ ಬಾಯ್, ಗಾರ್ಡನರ್ ಸಾಮಾನ್ಯ ಉಪಯೋಗ ಕೆಲಸಗಾರರು ಹುದ್ದೆಗಳಿಗೆ 7ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವೇತನದ ವಿವರ: ಸಹಾಯಕ ವ್ಯವಸ್ಥಾಪಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,000/-ರೂ, ಅಡುಗೆಯವರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/-ರೂ, ಸ್ವಾಗತಗಾರರು, ಉಗ್ರಾಣಿಕರು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು /ಬಿಲ್ ಕ್ಲರ್ಕ್ / ಕ್ಯಾಷಿಯರ್ ಮತ್ತು ಸಹಾಯಕ ಅಡುಗೆಯವರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 13,000/-ರೂ, ಅಡುಗೆ ಸಹಾಯಕರು, ಮಾಣಿ, ರೂಂ ಬಾಯ್, ಗಾರ್ಡನರ್ ಮತ್ತು ಸಾಮಾನ್ಯ ಉಪಯೋಗಿ ಕೆಲಸಗಾರರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 11,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ: ಅರ್ಹ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧಿಕೃತ ವೆಬ್ಸೈಟ್ https://www.kstdc.co/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗಧಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ತಮ್ಮ ಸ್ವವಿವರವನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮಾರ್ಚ್ 20,2020ರೊಳಗೆ ಕಚೇರಿಗೆ ಸ್ಟೀಡ್ ಪೋಸ್ಟ್ / ರಿಜಿಸ್ಟರ್ ಪೋಸ್ಟ್ / ಕೊರಿಯರ್ ಅಥವಾ ನೇರವಾಗಿ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಯು ತಾವು ಅರ್ಜಿ ಸಲ್ಲಿಸುತ್ತಿರುವ ಹುದ್ದೆಯ ಪದನಾಮವನ್ನು ಲಕೋಟೆ / ಪೋಸ್ಟ್ ಕವರ್‌ನ ಮೇಲೆ ನಮೂದಿಸತಕ್ಕದ್ದು.
ಕಚೇರಿಯ ವಿಳಾಸ: ವ್ಯವಸ್ಥಾಪಕರು (ಆಡಳಿತ), ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿ. ಕಾರ್ಯನಿರ್ವಾಹಕ ಕಛೇರಿ, ನೆಲಮಹಡಿ, ಯಶವಂತಪುರ ಟಿಟಿಎಂಸಿ, ಬಿ.ಎಂ.ಟಿ.ಸಿ ಬಸ್ ನಿಲ್ದಾಣ, ಯಶವಂತಪುರ ವೃತ್ತ, ಬೆಂಗಳೂರು-560022.
ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ನೇಮಕಾತಿಯ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Shimul Recruitment 2020: ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಗಮ, ಶಿವಮೊಗ್ಗ ಇಲ್ಲಿ ಖಾಲಿ ಇರುವ ಒಂದು ಸಹಾಯಕ ವ್ಯವಸ್ಥಾಪಕರು (ಬ್ಯಾಕ್‌ಲಾಗ್) ಹುದ್ದೆಯನ್ನು ಭರ್ತಿ ಮಾಡಲು ಪರಿಶಿಷ್ಟ ಜಾತಿ (ಅಂಗವಿಕಲ) ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 4,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.
ವಿದ್ಯಾರ್ಹತೆ: ಸಹಾಯಕ ವ್ಯವಸ್ಥಾಪಕರು (ಎಹೆಚ್/ಎಐ) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಶುವೈದ್ಯಕೀಯ ವಿಜ್ಞಾನ ಮತ್ತು ಪಶುಸಂಗೋಪನೆ ವಿಷಯದಲ್ಲಿ (ಬಿ.ವಿ.ಎಸ್ಸಿ ಅಂಡ್ ಎ.ಹೆಚ್) ಪದವಿಯನ್ನು ಹೊಂದಿರಬೇಕು. ವಯೋಮಿತಿ: ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಟ 18 ವರ್ಷ ಹಾಗೂ ಗರಿಷ್ಟ 40 ವರ್ಷ ಮೀರಿರಬಾರದು.
ವೇತನದ ವಿವರ: ಸಹಾಯಕ ವ್ಯವಸ್ಥಾಪಕರು (ಎಹೆಚ್/ಎಐ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 52,650/- ರಿಂದ 97,100/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ: ಹುದ್ದೆಗೆ ನಿಗದಿಪಡಿಸಿದ ಅರ್ಹತಾದಾಯಕ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಶೇಕಡಾವಾರು (ಮೆರಿಟ್) ಆಧಾರದ ಮೇಲೆ ಪರಿಗಣಿಸಲಾಗುವುದು.
ಅರ್ಜಿ ಶುಲ್ಕ: ಅಭ್ಯರ್ಥಿಗಳು 400/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಡಿ.ಡಿ ಯನ್ನು ಮ್ಯಾನೇಜಿಂಗ್ ಡೈರೆಕ್ಟರ್, ಶಿಮುಲ್ ಇವರ ಹೆಸರಿನಲ್ಲಿ ಶಿವಮೊಗ್ಗದಲ್ಲಿ ಸಂದಾಯವಾಗುವಂತೆ ಪಡೆದು ಅರ್ಜಿಯೊಂದಿಗೆ ಲಗತ್ತಿಸಬೇಕಿರುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ: ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.shimul.coop/?cat=72# ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ನಂತರ ಅಭ್ಯರ್ಥಿಗಳು ಭರ್ತಿ ಮಾಡಿದ ನಿಗದಿತ ನಮೂನೆಯ ಅರ್ಜಿ ಫಾರಂ ಅನ್ನು ಅಗತ್ಯ ದಾಖಲೆಗಳೊಂದಿಗೆ ವ್ಯವಸ್ಥಾಪಕ ನಿರ್ದೇಶಕರು, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿಗಮ, ಮಾಚೇನಹಳ್ಳಿ, ನಿದಿಗೆ (ಅಂಚೆ), ಶಿವಮೊಗ್ಗ-577 222 ಇಲ್ಲಿಗೆ ಖುದ್ದಾಗಿ/ಅಂಚೆ/ಕೊರಿಯರ್ ಮೂಲಕ ಏಪ್ರಿಲ್ 4,2020ರ ಸಂಜೆ 5 ಗಂಟೆಯೊಳಗಾಗಿ ತಲುಪಿಸಬೇಕಿರುತ್ತದೆ.
ದೂರವಾಣಿ ಸಂಖ್ಯೆ: 08182-246161, 246163
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
RDPR Recruitment 2020: 7 ಹುದ್ದೆಗಳ ನೇಮಕಾತಿ...ಮಾ.20ರೊಳಗೆ ಅರ್ಜಿ ಹಾಕಿ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 7 ಪ್ರಾಜೆಕ್ಟ್ ಅಧಿಕಾರಿ ಮತ್ತು ಜಿಲ್ಲಾ ಕೋ-ಆರ್ಡಿನೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 20,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.
Name Of The Posts ಪ್ರಾಜೆಕ್ಟ್ ಅಧಿಕಾರಿ, ಜಿಲ್ಲಾ ಕೋ-ಆರ್ಡಿನೇಟರ್
Organisation ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
Educational Qualification ಬಿ.ಟೆಕ್, ಎಂ.ಟೆಕ್/ಎಂ.ಇ/ಎಂ.ಎಸ್ಸಿ, ಸ್ನಾತಕೋತ್ತರ ಪದವಿ,
Job Location ಕರ್ನಾಟಕ
Salary Scale ಪ್ರಾಜೆಕ್ಟ್ ಅಧಿಕಾರಿ- ತಿಂಗಳಿಗೆ 50,000/-ರೂ, ಜಿಲ್ಲಾ ಕೋಆರ್ಡಿನೇಟರ್ -ತಿಂಗಳಿಗೆ 35,000/-ರೂ
Application Start Date March 4, 2020
Application End Date March 20, 2020
ವಿದ್ಯಾರ್ಹತೆ: ಬಿ.ಟೆಕ್, ಎಂ.ಟೆಕ್/ಎಂ.ಇ/ಎಂ.ಎಸ್ಸಿ ಮತ್ತು ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಯನ್ನು ಸಲ್ಲಿಸಬಹುದು.
ವಯೋಮಿತಿ: ಈ ಹುದ್ದೆಗಳಿಗೆ ಕನಿಷ್ಟ 21 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ: ಪ್ರಾಜೆಕ್ಟ್ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/-ರೂ ಮತ್ತು ಜಿಲ್ಲಾ ಕೋಆರ್ಡಿನೇಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ: ಅರ್ಜಿಸಲ್ಲಿಸಿದ ಅಭ್ಯರ್ಥಿಗಳ ವಿದ್ಯಾರ್ಹತೆ ಮತ್ತು ಅನುಭವವನ್ನು ಆಧರಿಸಿ ಮೆರಿಟ್ ಆಧಾರದಲ್ಲಿ 1:0 ಅನುಪಾತದಲ್ಲಿ ಲಿಖಿತ ಪರೀಕ್ಷೆಗಾಗಿ ಶಾರ್ಟ್‌ಲೀಸ್ಟ್ ಮಾಡಲಾಗುವುದು. ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ ?: ಅರ್ಹ ಅಭ್ಯರ್ಥಿಗಳು ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ವೆಬ್‌ಸೈಟ್ http://www.end2endmgnrega.co.in/Forms/login/frmlogin.aspx ನಲ್ಲಿ ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಮಾರ್ಚ್ 20,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ತದನಂತರ ಬಂದಂತಹ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ ಬ್ಯಾಂಕ್: ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರ ರಿಲೀಸ್
ಕರ್ನಾಟಕ ಬ್ಯಾಂಕ್, ಪ್ರೊಬೆಷನರಿ ಅಧಿಕಾರಿ (ಸ್ಕೇಲ್ I) ಹುದ್ದೆಗಳ ನೇಮಕಾತಿಗಾಗಿ ನಡೆಸುವ ಸಂದರ್ಶನ ಪ್ರಕ್ರಿಯೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಪ್ರೊಬೆಷನರಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಸಂದರ್ಶನ ಸುತ್ತಿಗೆ ಅರ್ಹರಾದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡುವುದು ಹೇಗೆ?:
ಸ್ಟೆಪ್ 1: ಮೊದಲು ಕರ್ನಾಟಕ ಬ್ಯಾಂಕ್‌ನ ಅಧಿಕೃತ ವೆಬ್ ಸೈಟ್ https://karnatakabank.com/ ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ ಹೋಮ್ ಪೇಜ್‌ನಲ್ಲಿ ಕಾಣಿಸುವ " Career" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಸ್ಕ್ರೀನ್ ತೆರೆಯುತ್ತದೆ ಅಲ್ಲಿ "Recruitment Of Probationary Officers (scale I) "ನ ಕೆಳಗೆ ನೀಡಲಾಗಿರುವ "Interview Call Letter-Download" Click Here ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ / ರೋಲ್ ನಂಬರ್ ಮತ್ತು ನಿಮ್ಮ ಜನ್ಮ ದಿನಾಂಕ / ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ
ಸ್ಟೆಪ್ 5: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಡೌನ್‌ಲೋಡ್ ಮಾಡಿಕೊಳ್ಳಿ
ಸ್ಟೆಪ್ 6: ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಸೇವ್ ಮಾಡಿಕೊಂಡು ಒಂದು ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ
ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗಬೇಕಿರುತ್ತದೆ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.
ಅಭ್ಯರ್ಥಿಗಳು ನೇರವಾಗಿ ಪ್ರವೇಶಪತ್ರವನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
ಸೈನಿಕ ಶಾಲೆ ಕೊಡಗು ಇಲ್ಲಿ ವಿವಿಧ 4 ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಲು ಅರ್ಜಿಯನ್ನು ಸಲ್ಲಿಸಲು ಮಾರ್ಚ್ 26,2020 ಕೊನೆಯ ದಿನವಾಗಿರುತ್ತದೆ. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.
Name Of The Posts ಮ್ಯಾಟ್ರನ್, ನರ್ಸಿಂಗ್ ಸಿಸ್ಟರ್, ಇತರೆ ಹುದ್ದೆಗಳು
Organisation ಸೈನಿಕ ಶಾಲೆ
Educational Qualification ಬಿ.ಎ/ಬಿ.ಎಸ್ಸಿ/ಬಿ.ಕಾಂ ಪದವಿ, ನರ್ಸಿಂಗ್ ಡಿಪ್ಲೋಮಾ/ಪದವಿ, 10ನೇ ತರಗತಿ/ತತ್ಸಮಾನ
Job Location ಕೊಡಗು (ಕರ್ನಾಟಕ)
Salary Scale ತಿಂಗಳಿಗೆ 16,000/- ರಿಂದ 22,000/-ರೂ
Application Start Date March 6, 2020
Application End Date March 26, 2020
ಶೈಕಷಣಿಕ ವಿದ್ಯಾರ್ಹತೆ: ಬಿ.ಎ/ಬಿ.ಎಸ್ಸಿ/ಬಿ.ಕಾಂ ಪದವಿ, ನರ್ಸಿಂಗ್ ಡಿಪ್ಲೋಮಾ/ಪದವಿ ಮತ್ತು 10ನೇ ತರಗತಿ/ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ / ಸಂಸ್ಥೆ /ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ: ಜೂನ್ 1,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 16,000/- ರಿಂದ 22,000/-ರೂ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ: ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಮಾರ್ಚ್ 26,2020ರೊಳಗೆ ಪಾವತಿಸಬೇಕಿರುತ್ತದೆ.
ಆಯ್ಕೆ ಪ್ರಕ್ರಿಯೆ: ಅರ್ಜಿದಾರರ ಕಿರುಪಟ್ಟಿಯನ್ನು ಮಾಡಲಾಗುವುದು ತದನಂತರ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ: ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಸೈನಿಕ ಶಾಲೆ ಕೊಡಗಿನ ಅಧಿಕೃತ ವೆಬ್ಸೈಟ್ http://sainikschoolkodagu.edu.in/ ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮಾರ್ಚ್ 26,2020 ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಕಚೇರಿಯ ವಿಳಾಸ: ದಿ ಪ್ರಿನ್ಸಿಪಾಲ್, ಸೈನಿಕ ಶಾಲೆ, ಕೊಡಗು (ಪೋ), ಕುಡಿಗೆ, ಸೋಮವಾರ್‌ಪೇಟ್ (ತಾ), ಕೊಡಗು (ಜಿ), ಕರ್ನಾಟಕ-571232.
KARTET 2019: ಪರೀಕ್ಷೆಯ ಪ್ರವೇಶ ಪತ್ರ ರಿಲೀಸ್
ಸಾರ್ವಜನಿಕ ಶಿಕ್ಷಣ ಇಲಾಖೆಯು ಟಿಇಟಿ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಈ ಪರೀಕ್ಷೆಯನ್ನು ತೆಗೆದುಕೊಂಡ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ಪ್ರವೇಶ ಪತ್ರವನ್ನು ಪಡೆಯಬಹುದು.
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2019 ಇದೇ ಮಾರ್ಚ್ ತಿಂಗಳ 29,2020ರ ಭಾನುವಾರದಂದು ನಡೆಯಲಿದೆ. ಈ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮಾತ್ರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹತೆ ಪಡೆಯುತ್ತಾರೆ. ಕರ್ನಾಟಕ ಟಿಇಟಿ 2019: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಫೆಬ್ರವರಿ 25,2020ರೊಳಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.
ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ?:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಇಲಾಖೆಯ ಅಧಿಕೃತ ವೆಬ್ಸೈಟ್ http://www.schooleducation.kar.nic.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ "Log in to generate the admission ticket for karnataka teachers eligibility test-2019" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ಯೂಸರ್ ನೇಮ್ ಮತ್ತು ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ
ಸ್ಟೆಪ್ 4: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಸೇವ್ ಮಾಡಿ ಡೌನ್‌ಲೋಡ್ ಮಾಡಿಕೊಳ್ಳಿ
ಅಭ್ಯರ್ಥಿಗಳು ಪ್ರವೇಶ ಪತ್ರದ ಪ್ರಿಂಟೌಟ್ ತೆಗೆದುಕೊಳ್ಳಿ ಜೊತೆಗೆ ಅಗತ್ಯ ದಾಖಲೆಗಳನ್ನು ಪರೀಕ್ಷಾ ಕೇಂದ್ರಕ್ಕೆ ತೆಗೆದುಕೊಂಡು ಹೋಗತಕ್ಕದ್ದು.
ಪರೀಕ್ಷೆಯ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
Saturday, March 7, 2020
ಕರ್ನಾಟಕ ಬಜೆಟ್ 2020: ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಕ್ಕೆ ಸಿಕ್ಕಿದೇನು?..
2020-21ನೇ ಸಾಲಿನ ಬಜೆಟ್ ಅನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನಿನ್ನೆ ಮಂಡಿಸಿದರು. ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಕ್ಕೆ ನೀಡಲಾಗಿರುವ ಬಜೆಟ್‌ನ ಪ್ರಮುಖಾಂಶಗಳ ಸಂಪೂರ್ಣ ಮಾಹಿತಿ ಇಲ್ಲಿದೆ.
- ಪ್ರತಿ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಂತಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಹಲಗಲಿ ಬೇಡರ ಬಂಡಾಯದಲ್ಲಿ ಹುತಾತ್ಮರಾದ ಜಡಗ ಮತ್ತು ಬಾಲ ಇವರ ಹೆಸರಿನಲ್ಲಿ ಒಂದು ಲಕ್ಷ ರೂ. ನಗದು ಪ್ರಶಸ್ತಿಯನ್ನು ನೀಡಲು ಕ್ರಮ. ಒಟ್ಟಾರೆ 60 ಲಕ್ಷ ರೂ. ಅನುದಾನ ನೀಡಲಾಗಿದೆ.
- ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ನಡೆಸುವ ವಸತಿ ಶಾಲೆಗಳಲ್ಲಿ ಆಯಾ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಕನಿಷ್ಟ ಶೇ.25 ರಷ್ಟು ಸೀಟು ಹಂಚಿಕೆ ಕ್ರಮ.
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ /ಯುವತಿಯರಿಗೆ ರಾಜ್ಯ ರಸ್ತೆ ಸಾರಿಗೆ ನಿಗಮದಗಳ ಮೂಲಕ ವಾಹನಾ ಚಾಲನಾ ತರಬೇತಿ, ವಿವಿಧ ಪ್ಯಾರಾಮೆಡಿಕಲ್ ಸರ್ಟಿಫಿಕೇಟ್ ಕೋರ್ಸ್‌ಗಳೊಂದಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ಸಣ್ಣ ಸರಕು ಸಾಗಾಣಿಕ ವಾಹನ ಖರೀದಿಗೆ ಸಾಲದ ಸೌಲಭ್ಯ ನೀಡಲು ಕ್ರಮ.
- ಒಂದೇ ಸೂರಿನಡಿ ಪೂರ್ವ ಪ್ರಾಥಮಿಕ ತರಗತಿಗಳಿಂದ ಪದವಿಪೂರ್ವ ತರಗತಿವರೆಗೆ ಶಿಕ್ಷಣ ನೀಡುವ 276 ಕರ್ನಾಟಕ ಪಬ್ಲಿಕ್ ಶಾಲೆಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ.
- ನಬಾರ್ಡ್ ಸಹಯೋಗದಲ್ಲಿ 758 ಕೋಟಿ ರೂ. ವೆಚ್ಚದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ 26 ಜಿಲ್ಲೆಗಳ 3386 ಸರ್ಕಾರಿ ಶಾಲೆಗಳ 6469 ಶಾಲಾ ಕೊಠಡಿಗಳ ಪುನರ್ ನಿರ್ಮಾಣಕ್ಕೆ ಕ್ರಮ.
- ಪ್ರತಿ ತಿಂಗಳಲ್ಲಿ ಎರಡು ಶನಿವಾರಗಳಂದು ಬ್ಯಾಗ್ ರಹಿತ ದಿನ, " ಸಂಭ್ರಮ ಶನಿವಾರ" ಆಚರಣೆ
- ದಾವಣಗೆರೆ, ಉಡುಪಿ ಮತ್ತು ದೊಡ್ಡಬಳ್ಳಾಪುರದಲ್ಲಿರುವ ಸ್ಕೌಟ್ಸ್ ಮತ್ತು ಗೈಡ್ಸ್ ಕೇಂದ್ರಗಳಿಗೆ ನಾಲ್ಕು ಕೋಟಿ ರೂ ಅನುದಾನ
- ಶಿಕ್ಷಕರ ಸೇವಾ ಸೌಲಭ್ಯಗಳನ್ನು ಅಂತರ್ಜಾಲದ ಮೂಲಕ ಒದಗಿಸಲು "ಶಿಕ್ಷಕ ಮಿತ್ರ" ಎಂಬ ಮೊಬೈಲ್ ಆಪ್ ಅಭಿವೃದ್ಧಿ.
- 400 ಸರ್ಕಾರಿ ಉರ್ದು ಶಾಲೆಗಳಲ್ಲಿ ಉರ್ದು ಮಾಧ್ಯಮದೊಂದಿಗೆ ಆಂಗ್ಲ ಮಾಧ್ಯಮ ಪ್ರಾರಂಭಕ್ಕೆ ಒಂದು ಕೋಟಿ ರೂ ಅನುದಾನ
- ಬೆಂಗಳೂರಿನ ವಿಶ್ವೇಶ್ವರಯ್ಯ ತಾಂತ್ರಿಕ ಕಾಲೇಜನ್ನು ಐಐಟಿ ಮಾದರಿಯಲ್ಲಿ ಸ್ವಾಯತ್ತಗೊಳಿಸಿ ಅಭಿವೃದ್ಧಿಪಡಿಸಲು 10 ಕೋಟಿ ರೂ ಅನುದಾನ
- ತಂತ್ರಜ್ಞಾನದ ನೆರವಿನಿಂದ ರಾಜ್ಯದ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಆಡಳಿತ ವ್ಯವಸ್ಥೆಯ ಸಮರ್ಥ ನಿರ್ವಹಣೆಗೆ ಒಂದು ಕೋಟಿ ರೂ.ಗಳ ವೆಚ್ಚದಲ್ಲಿ ಶಾಶ್ವತ ವ್ಯವಸ್ಥೆ.
- ಇಂಟರಾಕ್ಟಿವ್ ಆನ್‌ಲೈನ್ ಕೋರ್ಸ್‌ಗಳನ್ನು ಪ್ರಾರಂಭ ಹಾಗೂ ಗುಣಾತ್ಮಕ ಇ-ಕಂಟೆಂಟ್ ಅಭಿವೃದ್ದಿಗೆ ಒಂದು ಕೋಟಿ ರೂ. ವೆಚ್ಚ
- ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಡಿ ತಲಾ ಐದು ಕೋಟಿ ರೂ. ವೆಚ್ಚದಲ್ಲಿ ಜಿಯೋಸ್ಪೇಶಿಯಲ್ ತಂತ್ರಜ್ಞಾನ ಕೇಂದ್ರ ಸ್ಥಾಪನೆ.
- ಏಷ್ಯಾ ಖಂಡದ ದೇಶಗಳ ಶಿಕ್ಷಣ ಸಚಿವರ ಶೈಕ್ಷಣಿಕ ಸಮಾವೇಶ ಮತ್ತು ಬೃಹತ್ ವಸ್ತು ಪ್ರದರ್ಶನ ಆಯೋಜನೆ.
- ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ/ಆರೋಗ್ಯ ಕ್ಷೇಮ ಕೇಂದ್ರಗಳಲ್ಲಿ ಹಂತ ಹಂತವಾಗಿ 19 ಕೋಟಿ ರೂ. ವೆಚ್ಚದಲ್ಲಿ ಟೆಲಿಮೆಡಿಸನ್ ಸೇವೆ ವಿಸ್ತರಣೆ.
- ಎಲ್ಲಾ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ತಲಾ ಮೂರು ಕೋಟಿ ರೂ ವೆಚ್ಚದಲ್ಲಿ ಸಿಮ್ಯುಲೇಷನ್ ಲ್ಯಾಬ್ ತಮ್ತು ತಲಾ 30 ಲಕ್ಷ ರೂ. ವೆಚ್ಚದಲ್ಲಿ ಮಾಲಿಕ್ಯುಲಾರ್ ಬಯಾಲಜಿ ಲ್ಯಾಬ್ ಸ್ಥಾಪನೆ.
- ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಆರ್ಥಿಕ ನೆರವಿನೊಂದಿಗೆ ಚರ್ಮಶಾಸ್ತ್ರ ಮತ್ತು ಸೌಂದರ್ಯವರ್ಧಕ ಶಾಸ್ತ್ರದ ಸಂಸ್ಥೆ ಮತ್ತು ಜಿರಿಯಾಟ್ರಿಕ್ಸ್ ಸಂಸ್ಥೆಗಳ ಸ್ಥಾಪನೆ.
- ವೈದ್ಯಕೀಯ, ಶುಶ್ರೂಷಾ, ಅರೆ-ವೈದ್ಯಕೀಯ ಮತ್ತು ಫಾರ್ಮಸಿ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಒಂದು ಕೇಂದ್ರೀಕೃತ ಉದ್ಯೋಗ ಕೋಶ ಸ್ಥಾಪನೆ
- ಶ್ರವಣದೋಷವುಳ್ಳ ವ್ಯಕ್ತಿಗಳ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ವಿತರಿಸಲು 60 ಲಕ್ಷ ರೂ ಅನುದಾನ.
- ರಾಜ್ಯದ 500 ಅಂಧ ವಿದ್ಯಾರ್ಥಿಗಳಿಗೆ ತಲಾ 25,000ರೂ.ಗಳ ಮೊತ್ತದ ಟಾಕಿಂಗ್ ಮೊಬೈಲ್, ಬ್ರೈಲ್ ವಾಚ್ ಹಾಗೂ ವಾಕಿಂಗ್ ಸ್ಟಿಕ್‌ಗಳನ್ನೊಳಗೊಂಡ ಕಿಟ್ ವಿತರಣೆ. 1.25 ಕೋಟಿ ರೂ. ಅನುದಾನ.
- "ವನಿತಾ ಸಂಗಾತಿ" ಯೋಜನೆಯಡಿ ಗಾರ್ಮೆಂಟ್ ಉದ್ಯಮಗಳಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಕಾರ್ಮಿಕರಿಗೆ ಉಚಿತ ಬಿಎಂಟಿಸಿ ಮಾಸಿಕ ಬಸ್ ಪಾಸ್ ವಿತರಣೆಗೆ 25 ಕೋಟಿ ರೂ ಅನುದಾನ.
ಆದರ್ಶ ವಿದ್ಯಾಲಯ: 2020-21ನೇ ಸಾಲಿನ ದಾಖಲಾತಿಯ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ
ಆದರ್ಶ ವಿದ್ಯಾಲಯ: 2020-21ನೇ ಸಾಲಿನ ದಾಖಲಾತಿಯ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ಆದರ್ಶ ವಿದ್ಯಾಲಯ:
CIIL Recruitment 2020: ವಿವಿಧ 21 ಹುದ್ದೆಗಳಿಗೆ ಅರ್ಜಿ ಆಹ್ವಾನ
CIIL Recruitment 2020: ವಿವಿಧ 21 ಹುದ್ದೆಗಳಿಗೆ ಅರ್ಜಿ ಆಹ್ವಾನ
| CRITERIA | DETAILS |
| Name Of The Posts | ಪ್ರಾಜೆಕ್ಟ್ ಡೈರೆಕ್ಟರ್, ಸೀನಿಯರ್ ರಿಸೋರ್ಸ್ ಪರ್ಸನ್, ಆಫೀಸ್ ಸೂಪರ್‌ವೈಸರ್, ಅಸಿಸ್ಟೆಂಟ್ ಗ್ರೇಡ್ |
| Organisation | ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಲಾಂಗ್ವೇಜ್ (ಸಿಐಐಎಲ್) |
| Educational Qualification | ಡಾಕ್ಟರಲ್ ಪದವಿ ಮತ್ತು ಯಾವುದೇ ಪದವಿ |
| Job Location | ಮಲ್ಲಾಪುರಂ- ಕೇರಳ, ಮೈಸೂರು-ಕರ್ನಾಟಕ |
| Salary Scale | ತಿಂಗಳಿಗೆ 21,200/ -ರಿಂದ 70,000/-ರೂ |
| Application Start Date | March 5, 2020 |
| Application End Date | March 26, 2020 |
ವಿದ್ಯಾರ್ಹತೆ:
ವಯೋಮಿತಿ:
ವೇತನದ ವಿವರ:
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವುದು ಹೇಗೆ:
ಚಿಕ್ಕಬಳ್ಳಾಪುರ ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗಾವಕಾಶ.. ಏ.13 ರೊಳಗೆ ಅರ್ಜಿ ಹಾಕಿ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಖಾಲಿ ಇರುವ 88 ಅಂಗನವಾಡಿ ಕಾರ್ಯಕರ್ತೆ, ಮಿನಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ನೇಮಕ ಮಾ...
-
ಬಳ್ಳಾರಿ ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗಾವಕಾಶ.. ಏ.4 ರೊಳಗೆ ಅರ್ಜಿ ಹಾಕಿ ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವ 130 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸ...
-
ಆದರ್ಶ ವಿದ್ಯಾಲಯ: 2020-21ನೇ ಸಾಲಿನ ದಾಖಲಾತಿಯ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ ಆದರ್ಶ ವಿದ್ಯಾಲಯ 2020-21 ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ನ...
-
ಕರ್ನಾಟಕ ಬ್ಯಾಂಕ್, ಪ್ರೊಬೆಷನರಿ ಅಧಿಕಾರಿ (ಸ್ಕೇಲ್ I) ಹುದ್ದೆಗಳ ನೇಮಕಾತಿಗಾಗಿ ನಡೆಸುವ ಸಂದರ್ಶನ ಪ್ರಕ್ರಿಯೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಪ್ರೊಬೆಷ...











