Thursday, March 19, 2020

ಧಾರವಾಡದಲ್ಲಿ 2 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ 2 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ


ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ ವಸ್ತ್ರ ಹಾಗೂ ಉಡುಪು ವಿನ್ಯಾಸ ವಿಭಾಗದಲ್ಲಿ 2 ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಮಾರ್ಚ್ 26,2020ರಂದು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಿದ್ಯಾರ್ಹತೆ: ಎಂಹೆಚ್ಎಸ್ಸಿ ಪದವಿ ಅಥವಾ ಡಾಕ್ಟರಲ್ ಪದವಿಯನ್ನು ಮಾನ್ಯ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. 

ವಯೋಮಿತಿ: ಕೃಷಿ ವಿಶ್ವವಿದ್ಯಾಲಯ, ಧಾರವಾಡದ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು. 
ವೇತನದ ವಿವರ: ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಎಂಹೆಚ್ಎಸ್ಸಿ ಪದವೀಧರರು ಆಯ್ಕೆಯಾದಲ್ಲಿ ತಿಂಗಳಿಗೆ 27,000/-ರೂ ಮತ್ತು ಡಾಕ್ಟರಲ್ ಪದವೀಧರರು ಆಯ್ಕೆಯಾದಲ್ಲಿ ತಿಂಗಳಿಗೆ 32,000/-ರೂ ವೇತನವನ್ನು ನೀಡಲಾಗುವುದು. 
ಸಂದರ್ಶನದ ವಿವರ: ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http:/www.uasd.edu/ ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 26,2020ರಂದು ಬೆಳಿಗ್ಗೆ 10 ಗಂಟೆಗೆ ವಿದ್ಯಾಧಿಕಾರಿಗಳು, ಸಮುದಾಯ ವಿಜ್ಞಾನ ಮಹಾವಿದ್ಯಾಲಯ, ಕೃಷಿ ವಿಶ್ವವಿದ್ಯಾಲಯ, ಧಾರವಾಡ ಇವರ ಕಛೇರಿಯಲ್ಲಿ ಖುದ್ದು ಸಂದರ್ಶನಕ್ಕೆ ಹಾಜರಾಗಬಹುದು, 

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

No comments:

Post a Comment

ಚಿಕ್ಕಬಳ್ಳಾಪುರ ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗಾವಕಾಶ.. ಏ.13 ರೊಳಗೆ ಅರ್ಜಿ ಹಾಕಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಖಾಲಿ ಇರುವ 88 ಅಂಗನವಾಡಿ ಕಾರ್ಯಕರ್ತೆ, ಮಿನಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ನೇಮಕ ಮಾ...