Saturday, March 7, 2020

ಆದರ್ಶ ವಿದ್ಯಾಲಯ: 2020-21ನೇ ಸಾಲಿನ ದಾಖಲಾತಿಯ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ಆದರ್ಶ ವಿದ್ಯಾಲಯ: 2020-21ನೇ ಸಾಲಿನ ದಾಖಲಾತಿಯ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ


ಆದರ್ಶ ವಿದ್ಯಾಲಯ 2020-21 ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ನಡೆಸುವ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಿದೆ. ಪ್ರವೇಶಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
 
ಪ್ರವೇಶ ಪರೀಕ್ಷೆಯು ಇದೇ ಮಾರ್ಚ್ 15,2020 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ.
ಆದರ್ಶ ವಿದ್ಯಾಲಯ ಪ್ರವೇಶಾತಿ ಪರೀಕ್ಷೆಯ ಪ್ರವೇಶ ಪತ್ರ ರಿಲೀಸ್
ಅಭ್ಯರ್ಥಿಗಳು ಆದರ್ಶ ವಿದ್ಯಾಲಯದ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ. ಅಲ್ಲಿ ನಿಮ್ಮ ಅರ್ಜಿ ಸಂಖ್ಯೆ ಅಥವಾ ಎಸ್‌ಎಟಿಎಸ್‌ ಸಂಖ್ಯೆ ನೀಡಿ ಸಬ್‌ಮಿಟ್ ಮಾಡಿ. ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಸೇವ್‌ ಮಾಡಿ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ.

ಆದರ್ಶ ವಿದ್ಯಾಲಯ:

ಕರ್ನಾಟಕ ರಾಜ್ಯದ 74 ಶೈಕ್ಷಣಿಕವಾಗಿ ಹಿಂದುಳಿದ ಬ್ಲಾಕ್‌ಗಳಲ್ಲಿ 74 ಆದರ್ಶ ವಿದ್ಯಾಲಯಗಳನ್ನು ನಡೆಸಲಾಗಗುತ್ತಿದೆ. ಈ ಶಾಲೆಗಳಲ್ಲಿ 6 ರಿಂದ 10ನೇ ತರಗತಿ ವರೆಗೆ ಆಂಗ್ಲ ಮಾಧ್ಯಮದಲ್ಲಿ ಬೋಧನೆ ನಡೆಯುತ್ತಿದೆ. ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿಗಳನ್ನು ಗುರುತಿಸಿ ವಿದ್ಯಾರ್ಥಿಗಳ ಸಮಗ್ರ ಹಾಗೂ ಬೌದ್ದಿಕ, ಮಾನಸಿಕ ಬೆಳವಣಿಗೆಗೆ ಪೂರಕವಾಗುವ ಅತ್ಯುತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವುದು ಆದರ್ಶ ವಿದ್ಯಾಲಯಗಳ ಗುರಿಯಾಗಿದೆ.
 
2020-21ನೇ ಸಾಲಿನಲ್ಲಿ 6ನೇ ತರಗತಿಯ ಮಕ್ಕಳ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಯನ್ನು ನಡೆಸಿ ಆಯ್ಕೆ ಮಾಡಲಾಗುವುದು.

No comments:

Post a Comment

ಚಿಕ್ಕಬಳ್ಳಾಪುರ ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗಾವಕಾಶ.. ಏ.13 ರೊಳಗೆ ಅರ್ಜಿ ಹಾಕಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಖಾಲಿ ಇರುವ 88 ಅಂಗನವಾಡಿ ಕಾರ್ಯಕರ್ತೆ, ಮಿನಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ನೇಮಕ ಮಾ...