Tuesday, March 10, 2020

ಕೊಡಗು ಸೈನಿಕ ಶಾಲೆ ನೇಮಕಾತಿ 2020: 4 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ  


ಸೈನಿಕ ಶಾಲೆ ಕೊಡಗು ಇಲ್ಲಿ ವಿವಿಧ 4 ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಲು ಅರ್ಜಿಯನ್ನು ಸಲ್ಲಿಸಲು ಮಾರ್ಚ್ 26,2020 ಕೊನೆಯ ದಿನವಾಗಿರುತ್ತದೆ. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ. 

Name Of The Posts ಮ್ಯಾಟ್ರನ್, ನರ್ಸಿಂಗ್ ಸಿಸ್ಟರ್, ಇತರೆ ಹುದ್ದೆಗಳು 
Organisation ಸೈನಿಕ ಶಾಲೆ 
Educational Qualification ಬಿ.ಎ/ಬಿ.ಎಸ್ಸಿ/ಬಿ.ಕಾಂ ಪದವಿ, ನರ್ಸಿಂಗ್ ಡಿಪ್ಲೋಮಾ/ಪದವಿ, 10ನೇ ತರಗತಿ/ತತ್ಸಮಾನ 
Job Location ಕೊಡಗು (ಕರ್ನಾಟಕ) 
Salary Scale ತಿಂಗಳಿಗೆ 16,000/- ರಿಂದ 22,000/-ರೂ 
Application Start Date March 6, 2020 
Application End Date March 26, 2020 
ಶೈಕಷಣಿಕ ವಿದ್ಯಾರ್ಹತೆ: ಬಿ.ಎ/ಬಿ.ಎಸ್ಸಿ/ಬಿ.ಕಾಂ ಪದವಿ, ನರ್ಸಿಂಗ್ ಡಿಪ್ಲೋಮಾ/ಪದವಿ ಮತ್ತು 10ನೇ ತರಗತಿ/ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ / ಸಂಸ್ಥೆ /ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 
ವಯೋಮಿತಿ: ಜೂನ್ 1,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 
ವೇತನದ ವಿವರ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 16,000/- ರಿಂದ 22,000/-ರೂ ವೇತನವನ್ನು ನೀಡಲಾಗುವುದು. 
ಅರ್ಜಿ ಶುಲ್ಕ: ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಮಾರ್ಚ್ 26,2020ರೊಳಗೆ ಪಾವತಿಸಬೇಕಿರುತ್ತದೆ. 
ಆಯ್ಕೆ ಪ್ರಕ್ರಿಯೆ: ಅರ್ಜಿದಾರರ ಕಿರುಪಟ್ಟಿಯನ್ನು ಮಾಡಲಾಗುವುದು ತದನಂತರ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. 

ಅರ್ಜಿ ಸಲ್ಲಿಸುವುದು ಹೇಗೆ: ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಸೈನಿಕ ಶಾಲೆ ಕೊಡಗಿನ ಅಧಿಕೃತ ವೆಬ್‌ಸೈಟ್‌ http://sainikschoolkodagu.edu.in/ ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮಾರ್ಚ್ 26,2020 ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. 

ಕಚೇರಿಯ ವಿಳಾಸ: ದಿ ಪ್ರಿನ್ಸಿಪಾಲ್, ಸೈನಿಕ ಶಾಲೆ, ಕೊಡಗು (ಪೋ), ಕುಡಿಗೆ, ಸೋಮವಾರ್‌ಪೇಟ್ (ತಾ), ಕೊಡಗು (ಜಿ), ಕರ್ನಾಟಕ-571232.   

No comments:

Post a Comment

ಚಿಕ್ಕಬಳ್ಳಾಪುರ ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗಾವಕಾಶ.. ಏ.13 ರೊಳಗೆ ಅರ್ಜಿ ಹಾಕಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಖಾಲಿ ಇರುವ 88 ಅಂಗನವಾಡಿ ಕಾರ್ಯಕರ್ತೆ, ಮಿನಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ನೇಮಕ ಮಾ...