Saturday, March 7, 2020

ಕರ್ನಾಟಕ ಬಜೆಟ್ 2020: ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಕ್ಕೆ ಸಿಕ್ಕಿದೇನು?..

ಕರ್ನಾಟಕ ಬಜೆಟ್ 2020: ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಕ್ಕೆ ಸಿಕ್ಕಿದೇನು?..

 2020-21ನೇ ಸಾಲಿನ ಬಜೆಟ್ ಅನ್ನು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ನಿನ್ನೆ ಮಂಡಿಸಿದರು. ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಕ್ಕೆ ನೀಡಲಾಗಿರುವ ಬಜೆಟ್‌ನ ಪ್ರಮುಖಾಂಶಗಳ ಸಂಪೂರ್ಣ ಮಾಹಿತಿ ಇಲ್ಲಿದೆ.    

  • ಪ್ರತಿ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಂತಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಹಲಗಲಿ ಬೇಡರ ಬಂಡಾಯದಲ್ಲಿ ಹುತಾತ್ಮರಾದ ಜಡಗ ಮತ್ತು ಬಾಲ ಇವರ ಹೆಸರಿನಲ್ಲಿ ಒಂದು ಲಕ್ಷ ರೂ. ನಗದು ಪ್ರಶಸ್ತಿಯನ್ನು ನೀಡಲು ಕ್ರಮ. ಒಟ್ಟಾರೆ 60 ಲಕ್ಷ ರೂ. ಅನುದಾನ ನೀಡಲಾಗಿದೆ.
  •  ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ನಡೆಸುವ ವಸತಿ ಶಾಲೆಗಳಲ್ಲಿ ಆಯಾ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಕನಿಷ್ಟ ಶೇ.25 ರಷ್ಟು ಸೀಟು ಹಂಚಿಕೆ ಕ್ರಮ. 
  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ /ಯುವತಿಯರಿಗೆ ರಾಜ್ಯ ರಸ್ತೆ ಸಾರಿಗೆ ನಿಗಮದಗಳ ಮೂಲಕ ವಾಹನಾ ಚಾಲನಾ ತರಬೇತಿ, ವಿವಿಧ ಪ್ಯಾರಾಮೆಡಿಕಲ್ ಸರ್ಟಿಫಿಕೇಟ್ ಕೋರ್ಸ್‌ಗಳೊಂದಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ಸಣ್ಣ ಸರಕು ಸಾಗಾಣಿಕ ವಾಹನ ಖರೀದಿಗೆ ಸಾಲದ ಸೌಲಭ್ಯ ನೀಡಲು ಕ್ರಮ. 
  • ಒಂದೇ ಸೂರಿನಡಿ ಪೂರ್ವ ಪ್ರಾಥಮಿಕ ತರಗತಿಗಳಿಂದ ಪದವಿಪೂರ್ವ ತರಗತಿವರೆಗೆ ಶಿಕ್ಷಣ ನೀಡುವ 276 ಕರ್ನಾಟಕ ಪಬ್ಲಿಕ್ ಶಾಲೆಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ. 
  • ನಬಾರ್ಡ್ ಸಹಯೋಗದಲ್ಲಿ 758 ಕೋಟಿ ರೂ. ವೆಚ್ಚದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ 26 ಜಿಲ್ಲೆಗಳ 3386 ಸರ್ಕಾರಿ ಶಾಲೆಗಳ 6469 ಶಾಲಾ ಕೊಠಡಿಗಳ ಪುನರ್ ನಿರ್ಮಾಣಕ್ಕೆ ಕ್ರಮ. 
  • ಪ್ರತಿ ತಿಂಗಳಲ್ಲಿ ಎರಡು ಶನಿವಾರಗಳಂದು ಬ್ಯಾಗ್ ರಹಿತ ದಿನ, " ಸಂಭ್ರಮ ಶನಿವಾರ" ಆಚರಣೆ 
  • ದಾವಣಗೆರೆ, ಉಡುಪಿ ಮತ್ತು ದೊಡ್ಡಬಳ್ಳಾಪುರದಲ್ಲಿರುವ ಸ್ಕೌಟ್ಸ್ ಮತ್ತು ಗೈಡ್ಸ್ ಕೇಂದ್ರಗಳಿಗೆ ನಾಲ್ಕು ಕೋಟಿ ರೂ ಅನುದಾನ 
  • ಶಿಕ್ಷಕರ ಸೇವಾ ಸೌಲಭ್ಯಗಳನ್ನು ಅಂತರ್ಜಾಲದ ಮೂಲಕ ಒದಗಿಸಲು "ಶಿಕ್ಷಕ ಮಿತ್ರ" ಎಂಬ ಮೊಬೈಲ್ ಆಪ್ ಅಭಿವೃದ್ಧಿ. 
  • 400 ಸರ್ಕಾರಿ ಉರ್ದು ಶಾಲೆಗಳಲ್ಲಿ ಉರ್ದು ಮಾಧ್ಯಮದೊಂದಿಗೆ ಆಂಗ್ಲ ಮಾಧ್ಯಮ ಪ್ರಾರಂಭಕ್ಕೆ ಒಂದು ಕೋಟಿ ರೂ ಅನುದಾನ 
  • ಬೆಂಗಳೂರಿನ ವಿಶ್ವೇಶ್ವರಯ್ಯ ತಾಂತ್ರಿಕ ಕಾಲೇಜನ್ನು ಐಐಟಿ ಮಾದರಿಯಲ್ಲಿ ಸ್ವಾಯತ್ತಗೊಳಿಸಿ ಅಭಿವೃದ್ಧಿಪಡಿಸಲು 10 ಕೋಟಿ ರೂ ಅನುದಾನ 
  • ತಂತ್ರಜ್ಞಾನದ ನೆರವಿನಿಂದ ರಾಜ್ಯದ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಆಡಳಿತ ವ್ಯವಸ್ಥೆಯ ಸಮರ್ಥ ನಿರ್ವಹಣೆಗೆ ಒಂದು ಕೋಟಿ ರೂ.ಗಳ ವೆಚ್ಚದಲ್ಲಿ ಶಾಶ್ವತ ವ್ಯವಸ್ಥೆ. 
  • ಇಂಟರಾಕ್ಟಿವ್ ಆನ್‌ಲೈನ್ ಕೋರ್ಸ್‌ಗಳನ್ನು ಪ್ರಾರಂಭ ಹಾಗೂ ಗುಣಾತ್ಮಕ ಇ-ಕಂಟೆಂಟ್ ಅಭಿವೃದ್ದಿಗೆ ಒಂದು ಕೋಟಿ ರೂ. ವೆಚ್ಚ 
  • ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಡಿ ತಲಾ ಐದು ಕೋಟಿ ರೂ. ವೆಚ್ಚದಲ್ಲಿ ಜಿಯೋಸ್ಪೇಶಿಯಲ್ ತಂತ್ರಜ್ಞಾನ ಕೇಂದ್ರ ಸ್ಥಾಪನೆ. 
  • ಏಷ್ಯಾ ಖಂಡದ ದೇಶಗಳ ಶಿಕ್ಷಣ ಸಚಿವರ ಶೈಕ್ಷಣಿಕ ಸಮಾವೇಶ ಮತ್ತು ಬೃಹತ್ ವಸ್ತು ಪ್ರದರ್ಶನ ಆಯೋಜನೆ. 
  • ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ/ಆರೋಗ್ಯ ಕ್ಷೇಮ ಕೇಂದ್ರಗಳಲ್ಲಿ ಹಂತ ಹಂತವಾಗಿ 19 ಕೋಟಿ ರೂ. ವೆಚ್ಚದಲ್ಲಿ ಟೆಲಿಮೆಡಿಸನ್ ಸೇವೆ ವಿಸ್ತರಣೆ. 
  • ಎಲ್ಲಾ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ತಲಾ ಮೂರು ಕೋಟಿ ರೂ ವೆಚ್ಚದಲ್ಲಿ ಸಿಮ್ಯುಲೇಷನ್‌ ಲ್ಯಾಬ್ ತಮ್ತು ತಲಾ 30 ಲಕ್ಷ ರೂ. ವೆಚ್ಚದಲ್ಲಿ ಮಾಲಿಕ್ಯುಲಾರ್ ಬಯಾಲಜಿ ಲ್ಯಾಬ್ ಸ್ಥಾಪನೆ. 
  • ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಆರ್ಥಿಕ ನೆರವಿನೊಂದಿಗೆ ಚರ್ಮಶಾಸ್ತ್ರ ಮತ್ತು ಸೌಂದರ್ಯವರ್ಧಕ ಶಾಸ್ತ್ರದ ಸಂಸ್ಥೆ ಮತ್ತು ಜಿರಿಯಾಟ್ರಿಕ್ಸ್ ಸಂಸ್ಥೆಗಳ ಸ್ಥಾಪನೆ. 
  • ವೈದ್ಯಕೀಯ, ಶುಶ್ರೂಷಾ, ಅರೆ-ವೈದ್ಯಕೀಯ ಮತ್ತು ಫಾರ್ಮಸಿ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಒಂದು ಕೇಂದ್ರೀಕೃತ ಉದ್ಯೋಗ ಕೋಶ ಸ್ಥಾಪನೆ 
  • ಶ್ರವಣದೋಷವುಳ್ಳ ವ್ಯಕ್ತಿಗಳ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ವಿತರಿಸಲು 60 ಲಕ್ಷ ರೂ ಅನುದಾನ. 
  • ರಾಜ್ಯದ 500 ಅಂಧ ವಿದ್ಯಾರ್ಥಿಗಳಿಗೆ ತಲಾ 25,000ರೂ.ಗಳ ಮೊತ್ತದ ಟಾಕಿಂಗ್ ಮೊಬೈಲ್, ಬ್ರೈಲ್ ವಾಚ್ ಹಾಗೂ ವಾಕಿಂಗ್ ಸ್ಟಿಕ್‌ಗಳನ್ನೊಳಗೊಂಡ ಕಿಟ್ ವಿತರಣೆ. 1.25 ಕೋಟಿ ರೂ. ಅನುದಾನ. 
  • "ವನಿತಾ ಸಂಗಾತಿ" ಯೋಜನೆಯಡಿ ಗಾರ್ಮೆಂಟ್ ಉದ್ಯಮಗಳಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಕಾರ್ಮಿಕರಿಗೆ ಉಚಿತ ಬಿಎಂಟಿಸಿ ಮಾಸಿಕ ಬಸ್ ಪಾಸ್ ವಿತರಣೆಗೆ 25 ಕೋಟಿ ರೂ ಅನುದಾನ.

No comments:

Post a Comment

ಚಿಕ್ಕಬಳ್ಳಾಪುರ ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗಾವಕಾಶ.. ಏ.13 ರೊಳಗೆ ಅರ್ಜಿ ಹಾಕಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಖಾಲಿ ಇರುವ 88 ಅಂಗನವಾಡಿ ಕಾರ್ಯಕರ್ತೆ, ಮಿನಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ನೇಮಕ ಮಾ...