Tuesday, March 10, 2020

ಕರ್ನಾಟಕ ಬ್ಯಾಂಕ್: ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರ ರಿಲೀಸ್



ಕರ್ನಾಟಕ ಬ್ಯಾಂಕ್, ಪ್ರೊಬೆಷನರಿ ಅಧಿಕಾರಿ (ಸ್ಕೇಲ್ I) ಹುದ್ದೆಗಳ ನೇಮಕಾತಿಗಾಗಿ ನಡೆಸುವ ಸಂದರ್ಶನ ಪ್ರಕ್ರಿಯೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಪ್ರೊಬೆಷನರಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಸಂದರ್ಶನ ಸುತ್ತಿಗೆ ಅರ್ಹರಾದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.   

ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡುವುದು ಹೇಗೆ?: 
ಸ್ಟೆಪ್ 1: ಮೊದಲು ಕರ್ನಾಟಕ ಬ್ಯಾಂಕ್‌ನ ಅಧಿಕೃತ ವೆಬ್ ಸೈಟ್ https://karnatakabank.com/ ಗೆ ಭೇಟಿ ಕೊಡಿ 
ಸ್ಟೆಪ್ 2: ನಂತರ ಹೋಮ್ ಪೇಜ್‌ನಲ್ಲಿ ಕಾಣಿಸುವ " Career" ಮೇಲೆ ಕ್ಲಿಕ್ ಮಾಡಿ 
ಸ್ಟೆಪ್ 3: ಹೊಸ ಸ್ಕ್ರೀನ್ ತೆರೆಯುತ್ತದೆ ಅಲ್ಲಿ "Recruitment Of Probationary Officers (scale I) "ನ ಕೆಳಗೆ ನೀಡಲಾಗಿರುವ "Interview Call Letter-Download" Click Here ಮೇಲೆ ಕ್ಲಿಕ್ ಮಾಡಿ 
ಸ್ಟೆಪ್ 4: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್‌ ನಂಬರ್ / ರೋಲ್ ನಂಬರ್ ಮತ್ತು ನಿಮ್ಮ ಜನ್ಮ ದಿನಾಂಕ / ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ 
ಸ್ಟೆಪ್ 5: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಡೌನ್‌ಲೋಡ್ ಮಾಡಿಕೊಳ್ಳಿ 
ಸ್ಟೆಪ್ 6: ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಸೇವ್ ಮಾಡಿಕೊಂಡು ಒಂದು ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ 

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗಬೇಕಿರುತ್ತದೆ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ. 

ಅಭ್ಯರ್ಥಿಗಳು ನೇರವಾಗಿ ಪ್ರವೇಶಪತ್ರವನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ

No comments:

Post a Comment

ಚಿಕ್ಕಬಳ್ಳಾಪುರ ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗಾವಕಾಶ.. ಏ.13 ರೊಳಗೆ ಅರ್ಜಿ ಹಾಕಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಖಾಲಿ ಇರುವ 88 ಅಂಗನವಾಡಿ ಕಾರ್ಯಕರ್ತೆ, ಮಿನಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ನೇಮಕ ಮಾ...