Friday, March 20, 2020

ವಾಟ್ಸಾಪ್‌ನಲ್ಲಿ 'MyGov ಕೊರೊನಾ ಸಹಾಯಕೇಂದ್ರ' ಆರಂಭಿಸಿದ ಕೇಂದ್ರ ಸರ್ಕಾರ



ದೇಶದಲ್ಲಿ ಆತಂಕ ಸೃಷ್ಟಿಸಿರುವ ಕೊರೊನಾ ವೈರಸ್‌ ಕುರಿತು ಜಾಗೃತಿ ಮೂಡಿಸಲು ಕೇಂದ್ರ ಸರ್ಕಾರ 'ಮೈಗೋವ್ ಕೊರೊನಾ ಸಹಾಯಕೇಂದ್ರ' (MyGov Coronavirus helpdesk) ಆರಂಭಿಸಿದೆ.

ಇದು ವಾಟ್ಸಾಪ್‌ನಲ್ಲಿ ಲಭ್ಯವಿದ್ದು, ಕೊರೊನಾ ಕುರಿತು ನಿಮಗೆ ಕಾ
ಡುವ ಅನುಮಾನ, ಕುತೂಹಲಗಳಿಗೆ ಈ ಆಪ್ ನಲ್ಲಿ ಉತ್ತರ ಪಡೆಯಬಹುದು. ಕೊರೊನಾ ಕುರಿತಂತೆ ಸಂದೇಶಗಳಿದ್ದರೂ ಈ ವಾಟ್ಸಾಪ್ ಚಾಟ್‌ಬಾಟ್‌ ಮೂಲಕ ಸಿಗುತ್ತೆ.

ಅದಕ್ಕಾಗಿ ನೀವು ಮಾಡಬೇಕಾಗಿರುವುದು ಇಷ್ಟೆ. ನಿಮ್ಮ ಫೋನ್‌ನಲ್ಲಿ 9013151515 ಸಂಖ್ಯೆ ಸೇವ್ ಮಾಡಿಕೊಳ್ಳಿ. ಕೊರೊನಾ ಬಗ್ಗೆ ನಿಮಗೆ ಏನಾದರೂ ಮಾಹಿತಿ ಬೇಕು ಅಂದ್ರೆ ಈ ನಂಬರ್‌ಗೆ ಸಂದೇಶ ರವಾನಿಸಿ, ತಕ್ಷಣ ಮಾಹಿತಿ ಸಿಗುತ್ತೆ.

ಈ ವಾಟ್ಸಾಪ್ ಚಾಟ್‌ಬಾಟ್‌ ಸ್ವಯಂಚಾಲಿತವಾಗಿರುತ್ತದೆ ಮತ್ತು ಕೊರೊನಾಗೆ ಸಂಬಂಧಪಟ್ಟಂತೆ ಕೇಂದ್ರ ಇಲಾಖೆಯಿಂದ ಸ್ಪಷ್ಟ ಮಾಹಿತಿ ಸಿಗುತ್ತದೆ ಎಂದು ತಿಳಿಸಲಾಗಿದೆ. ಈ ಮೂಲಕ ವಾಟ್ಸಾಪ್, ಸೋಶಿಯಲ್ ಮೀಡಿಯಾಗಳಲ್ಲಿ ಹರಡುವ ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ.

ಮೈಗೋವ್ ಕೊರೊನಾ ಸಹಾಯಕೇಂದ್ರ ವಾಟ್ಸಾಪ್‌ ಚಾಟ್‌ಬಾಟ್‌ ಬಿಟ್ಟು ಕೇಂದ್ರ ಸಹಾಯವಾಣಿ ಮತ್ತು ಆಯಾ ರಾಜ್ಯಗಳ ಸಹಾಯವಾಣಿ ಕೇಂದ್ರಗಳು ಕಾರ್ಯರೂಪದಲ್ಲಿದೆ. ಇದುವರೆಗೂ ಭಾರತದಲ್ಲಿ 206ಕ್ಕೂ ಹೆಚ್ಚು ಕೊರೊನಾ ಸೋಂಕಿತರು ದೃಢಪಟ್ಟಿದ್ದಾರೆ.

No comments:

Post a Comment

ಚಿಕ್ಕಬಳ್ಳಾಪುರ ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗಾವಕಾಶ.. ಏ.13 ರೊಳಗೆ ಅರ್ಜಿ ಹಾಕಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಖಾಲಿ ಇರುವ 88 ಅಂಗನವಾಡಿ ಕಾರ್ಯಕರ್ತೆ, ಮಿನಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ನೇಮಕ ಮಾ...