Karnataka 2nd PUC Exam: ಈ ಬಾರಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳ ಸಂಖ್ಯೆ ಎಷ್ಟು ಗೊತ್ತಾ!
ನಾಳೆಯಿಂದ ಕರ್ನಾಟಕ ದ್ವಿತೀಯ ಪಿಯುಸಿ ಬೋರ್ಡ್ ಪರೀಕ್ಷೆ ಪ್ರಾರಂಭವಾಗಲಿದೆ. ಈ ವರ್ಷ ಸುಮಾರು 6 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಒಟ್ಟು 1016 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 2020ರ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 4,2020 ರಿಂದ ಮಾರ್ಚ್ 23,2020ರ ವರೆಗೆ ನಡೆಯಲಿದ್ದು, ಪರೀಕ್ಷಾ ವೇಳಾ ಪಟ್ಟಿ ಕೆಳಗಿನಂತಿದೆ. ಈ ಬಾರಿ ಪರೀಕ್ಷೆ ಎದುರಿಸುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಹೀಗಿದೆ: ಒಟ್ಟು: 6,80,674 ಹುಡುಗಿಯರಸಂಖ್ಯೆ: 3,41,618 ಹುಡುಗರ ಸಂಖ್ಯೆ: 3,38,431 ವಿಜ್ಞಾನ ವಿಭಾಗ: 2, 16,930 ವಾಣಿಜ್ಯ ವಿಭಾಗ: 2,61,674 ಕಲಾ ವಿಭಾಗ: 2,01,445 ಕರ್ನಾಟಕ ದ್ವಿತೀಯ ಪಿಯುಸಿ ಬೋರ್ಡ್ ಪರೀಕ್ಷೆ 2020 ಸಿದ್ಧತೆ ಹೇಗಿದೆ: ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ ಪ್ರಶ್ನಾಪತ್ರಿಕೆ ಸಾಗಿಸುವ ವಾಹನಗಳಿಗೆ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪರೀಕ್ಷೆಯ ಕೇಂದ್ರಗಳ ಮೇಲೆ ಹೆಚ್ಚು ನಿಗಾ ಇಡಲಾಗಿದೆ ಈವರೆಗೆ ಒಟ್ಟು 35,156 ಮೌಲ್ಯಮಾಪಕರು ಹೆಸರು ನೋಂದಣಿ ಮಾಡಿಕೊಂಡಿದ್ದು, ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡ ಕೂಡಲೇ ದ್ವಿತೀಯ ಪಿಯುಸಿ ಫಲಿತಾಂಶ ಹೊರಬೀಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಕಪ್ಪುಪಟ್ಟಿ ಧರಿಸಿ ಪರೀಕ್ಷೆ ನಡೆಸಿಕೊಡಲು ನಿರ್ಧರಿಸಿದೆ. ಈ ಕುರಿತು ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್ ಹೇಳಿದ್ದಾರೆ.
ಕೆಎಸ್‌ಇಇಬಿ ಬಗ್ಗೆ ಒಂದಿಷ್ಟು: 1966ರಲ್ಲಿ ಕೆಎಸ್‌ಇಇಬಿ ಸ್ಥಾಪಿತವಾಯಿ. ಪ್ರತಿವರ್ಷ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಪಾಲ್ಗೊಳ್ಳುತ್ತಾರೆ. ಈ ಪರೀಕ್ಷೆಯು ಮುಂದಿನ ಕೆರಿಯರ್ ಜೀವನಕ್ಕೆ ಸಂಬಂಧಪಟ್ಟ ಪರೀಕ್ಷೆಯಾಗಿದೆ.

No comments:
Post a Comment