Tuesday, March 10, 2020

KARTET 2019: ಪರೀಕ್ಷೆಯ ಪ್ರವೇಶ ಪತ್ರ ರಿಲೀಸ್

  

ಸಾರ್ವಜನಿಕ ಶಿಕ್ಷಣ ಇಲಾಖೆಯು ಟಿಇಟಿ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಈ ಪರೀಕ್ಷೆಯನ್ನು ತೆಗೆದುಕೊಂಡ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ಪ್ರವೇಶ ಪತ್ರವನ್ನು ಪಡೆಯಬಹುದು. 


ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2019 ಇದೇ ಮಾರ್ಚ್ ತಿಂಗಳ 29,2020ರ ಭಾನುವಾರದಂದು ನಡೆಯಲಿದೆ. ಈ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮಾತ್ರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹತೆ ಪಡೆಯುತ್ತಾರೆ. ಕರ್ನಾಟಕ ಟಿಇಟಿ 2019: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಫೆಬ್ರವರಿ 25,2020ರೊಳಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. 

ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ?: 

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಇಲಾಖೆಯ ಅಧಿಕೃತ ವೆಬ್‌ಸೈಟ್‌ http://www.schooleducation.kar.nic.in/ ಗೆ ಭೇಟಿ ನೀಡಿ. 

ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ "Log in to generate the admission ticket for karnataka teachers eligibility test-2019" ಮೇಲೆ ಕ್ಲಿಕ್ ಮಾಡಿ 

ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ಯೂಸರ್ ನೇಮ್ ಮತ್ತು ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ 

ಸ್ಟೆಪ್ 4: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಸೇವ್‌ ಮಾಡಿ ಡೌನ್‌ಲೋಡ್ ಮಾಡಿಕೊಳ್ಳಿ 

ಅಭ್ಯರ್ಥಿಗಳು ಪ್ರವೇಶ ಪತ್ರದ ಪ್ರಿಂಟೌಟ್ ತೆಗೆದುಕೊಳ್ಳಿ ಜೊತೆಗೆ ಅಗತ್ಯ ದಾಖಲೆಗಳನ್ನು ಪರೀಕ್ಷಾ ಕೇಂದ್ರಕ್ಕೆ ತೆಗೆದುಕೊಂಡು ಹೋಗತಕ್ಕದ್ದು. 

ಪರೀಕ್ಷೆಯ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

No comments:

Post a Comment

ಚಿಕ್ಕಬಳ್ಳಾಪುರ ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗಾವಕಾಶ.. ಏ.13 ರೊಳಗೆ ಅರ್ಜಿ ಹಾಕಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಖಾಲಿ ಇರುವ 88 ಅಂಗನವಾಡಿ ಕಾರ್ಯಕರ್ತೆ, ಮಿನಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ನೇಮಕ ಮಾ...