KSET Exam Date: ಅರ್ಜಿಸಲ್ಲಿಕೆಯ ಅವಧಿ ವಿಸ್ತರಣೆ
ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆಎಸ್ಇಟಿ)-2020 ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ.
ಅಭ್ಯರ್ಥಿಗಳಿಂದ ಮಾರ್ಚ್ 4,2020ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು ಆದರೆ ಇದೀಗ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದ್ದು, ಅಭ್ಯರ್ಥಿಗಳು ಮಾರ್ಚ್ 6,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು 250/-ರೂ ದಂಡಶುಲ್ಕದೊಂದಿಗೆ ಮಾರ್ಚ್ 11,2020ರೊಳಗೆ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. KSET: ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಮಾ.4ರೊಳಗೆ ಅರ್ಜಿ ಹಾಕಿ ಸ್ನಾತಕೋತ್ತರ ಪದವಿಯಲ್ಲಿ ಶೇ 55%ರಷ್ಟು ಅಂಕ ಗಳಿಸಿದ ಸಾಮಾನ್ಯ ಅಭ್ಯರ್ಥಿಗಳು ಮತ್ತು ಶೇ 50%ರಷ್ಟು ಅಂಕ ಪಡೆದ ಪರಿಶಿಷ್ಟ ಜಾತಿ, ಪಂಗಡ, ವಿವಿಧ ಹಿಂದುಳಿದ ವರ್ಗ ಮತ್ತು ಅಂಗವಿಕಲ ಅಭ್ಯರ್ಥಿಗಳು ಈ ಪರೀಕ್ಷೆಯನ್ನು ತೆಗೆದುಕೊಳ್ಳಬಹುದು.
ಕೆಸೆಟ್ ಪರೀಕ್ಷೆ: ಈ ಭಾರಿ ಕೆಸೆಟ್ ಪರೀಕ್ಷೆಯು ಏಪ್ರಿಲ್ 12,2020ರಂದು ಕರ್ನಾಟಕ ರಾಜ್ಯಾದ್ಯಂತ 11 ನೋಡಲ್ ಕೇಂದ್ರಗಳಲ್ಲಿ ನಡೆಯಲಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು, ಕರ್ನಾಟಕ ರಾಜ್ಯದ ಯಾವುದೇ ವಿಶ್ವವಿದ್ಯಾನಿಲಯ/ಪ್ರಥಮ ದರ್ಜೆ ಪದವಿ ಕಾಲೇಜು/ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಗೊಳ್ಳಲು ಅರ್ಹರಾಗಿರುತ್ತಾರೆ.

No comments:
Post a Comment