Wednesday, March 11, 2020

SEBI: 147 ಸಹಾಯಕ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿ...ತಿಂಗಳಿಗೆ 55,600/-ರೂ ವೇತನ ಪಡೆಯುವ ಅವಕಾಶ


ಸೆಕ್ಯುರಿಟಿ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) 147 ಸಹಾಯಕ ವ್ಯವಸ್ಥಾಪಕ ( ಗ್ರೇಡ್ ಎ ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 23,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಸೆಬಿಯಲ್ಲಿ 147 ಹುದ್ದೆಗಳಿಗೆ ಅರ್ಜಿ ಆಹ್ವಾನ… ಮಾ.23ರೊಳಗೆ ಅರ್ಜಿ ಹಾಕಿ
  • Sponsored
  • Sponsored
 
CRITERIADETAILS
Name Of The Postsಸಹಾಯಕ ವ್ಯವಸ್ಥಾಪಕ (ಗ್ರೇಡ್ ಎ)
Organisationಸೆಕ್ಯುರಿಟಿ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ)
Educational Qualificationಸ್ನಾತಕೋತ್ತರ ಪದವಿ, ಕಾನೂನು ಪದವಿ, ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ, ಪದವಿ, ಸ್ನಾತಕೋತ್ತರ ಪದವಿ
Job Locationಭಾರತದೆಲ್ಲೆಡೆ
Salary Scaleತಿಂಗಳಿಗೆ 28,150/-ರಿಂದ 55,600/-ರೂ
Application Start DateMarch 7, 2020
Application End DateMarch 23, 2020

ವಿದ್ಯಾರ್ಹತೆ:

ಸ್ನಾತಕೋತ್ತರ ಪದವಿ, ಕಾನೂನು ಪದವಿ, ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ /ಸಂಸ್ಥೆ / ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಫೆಬ್ರವರಿ 29,2020ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಸಹಾಯಕ ವ್ಯವಸ್ಥಾಪಕ ಗ್ರೇಡ್ ಎ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 28,150/-ರಿಂದ 55,600/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಆನ್‌ಲೈನ್ ಸ್ಕ್ರೀನಿಂಗ್ ಪರೀಕ್ಷೆ, ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಸಾಮಾನ್ಯ/ ಆರ್ಥಿಕವಾಗಿ ಹಿಂದುಳಿದ /ಓಬಿಸಿ ಅಭ್ಯರ್ಥಿಗಳು 1000/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಮಾರ್ಚ್ 23,2020ರೊಳಗೆ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://www.sebi.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 23,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
 
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

No comments:

Post a Comment

ಚಿಕ್ಕಬಳ್ಳಾಪುರ ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗಾವಕಾಶ.. ಏ.13 ರೊಳಗೆ ಅರ್ಜಿ ಹಾಕಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಖಾಲಿ ಇರುವ 88 ಅಂಗನವಾಡಿ ಕಾರ್ಯಕರ್ತೆ, ಮಿನಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ನೇಮಕ ಮಾ...