Tuesday, March 10, 2020

Shimul Recruitment 2020: ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ



ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಗಮ, ಶಿವಮೊಗ್ಗ ಇಲ್ಲಿ ಖಾಲಿ ಇರುವ ಒಂದು ಸಹಾಯಕ ವ್ಯವಸ್ಥಾಪಕರು (ಬ್ಯಾಕ್‌ಲಾಗ್) ಹುದ್ದೆಯನ್ನು ಭರ್ತಿ ಮಾಡಲು ಪರಿಶಿಷ್ಟ ಜಾತಿ (ಅಂಗವಿಕಲ) ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
 ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 4,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ. 

ವಿದ್ಯಾರ್ಹತೆ: ಸಹಾಯಕ ವ್ಯವಸ್ಥಾಪಕರು (ಎಹೆಚ್‌/ಎಐ) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಶುವೈದ್ಯಕೀಯ ವಿಜ್ಞಾನ ಮತ್ತು ಪಶುಸಂಗೋಪನೆ ವಿಷಯದಲ್ಲಿ (ಬಿ.ವಿ.ಎಸ್ಸಿ ಅಂಡ್ ಎ.ಹೆಚ್) ಪದವಿಯನ್ನು ಹೊಂದಿರಬೇಕು. ವಯೋಮಿತಿ: ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಟ 18 ವರ್ಷ ಹಾಗೂ ಗರಿಷ್ಟ 40 ವರ್ಷ ಮೀರಿರಬಾರದು. 
ವೇತನದ ವಿವರ: ಸಹಾಯಕ ವ್ಯವಸ್ಥಾಪಕರು (ಎಹೆಚ್‌/ಎಐ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 52,650/- ರಿಂದ 97,100/-ರೂ ವೇತನವನ್ನು ನೀಡಲಾಗುವುದು. 
ಆಯ್ಕೆ ಪ್ರಕ್ರಿಯೆ: ಹುದ್ದೆಗೆ ನಿಗದಿಪಡಿಸಿದ ಅರ್ಹತಾದಾಯಕ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಶೇಕಡಾವಾರು (ಮೆರಿಟ್) ಆಧಾರದ ಮೇಲೆ ಪರಿಗಣಿಸಲಾಗುವುದು. 
ಅರ್ಜಿ ಶುಲ್ಕ: ಅಭ್ಯರ್ಥಿಗಳು 400/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಡಿ.ಡಿ ಯನ್ನು ಮ್ಯಾನೇಜಿಂಗ್ ಡೈರೆಕ್ಟರ್, ಶಿಮುಲ್ ಇವರ ಹೆಸರಿನಲ್ಲಿ ಶಿವಮೊಗ್ಗದಲ್ಲಿ ಸಂದಾಯವಾಗುವಂತೆ ಪಡೆದು ಅರ್ಜಿಯೊಂದಿಗೆ ಲಗತ್ತಿಸಬೇಕಿರುತ್ತದೆ. 

ಅರ್ಜಿ ಸಲ್ಲಿಸುವುದು ಹೇಗೆ: ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://www.shimul.coop/?cat=72# ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ನಂತರ ಅಭ್ಯರ್ಥಿಗಳು ಭರ್ತಿ ಮಾಡಿದ ನಿಗದಿತ ನಮೂನೆಯ ಅರ್ಜಿ ಫಾರಂ ಅನ್ನು ಅಗತ್ಯ ದಾಖಲೆಗಳೊಂದಿಗೆ ವ್ಯವಸ್ಥಾಪಕ ನಿರ್ದೇಶಕರು, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿಗಮ, ಮಾಚೇನಹಳ್ಳಿ, ನಿದಿಗೆ (ಅಂಚೆ), ಶಿವಮೊಗ್ಗ-577 222 ಇಲ್ಲಿಗೆ ಖುದ್ದಾಗಿ/ಅಂಚೆ/ಕೊರಿಯರ್ ಮೂಲಕ ಏಪ್ರಿಲ್ 4,2020ರ ಸಂಜೆ 5 ಗಂಟೆಯೊಳಗಾಗಿ ತಲುಪಿಸಬೇಕಿರುತ್ತದೆ. 
ದೂರವಾಣಿ ಸಂಖ್ಯೆ: 08182-246161, 246163 

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

No comments:

Post a Comment

ಚಿಕ್ಕಬಳ್ಳಾಪುರ ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗಾವಕಾಶ.. ಏ.13 ರೊಳಗೆ ಅರ್ಜಿ ಹಾಕಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಖಾಲಿ ಇರುವ 88 ಅಂಗನವಾಡಿ ಕಾರ್ಯಕರ್ತೆ, ಮಿನಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ನೇಮಕ ಮಾ...